Mysore
24
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಕ್ಯಾಬ್​ನಲ್ಲಿ ಬಂದು ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆ : ಕಾರು ಚಾಲಕ ಮತ್ತು ಪೊಲೀಸರಿಂದ ರಕ್ಷಣೆ

ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ಕಾರು ಚಾಲಕ ಮತ್ತು ಪೊಲೀಸರು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾರೆ. ಆದರೆ ಮಹಿಳೆಯನ್ನು ಕ್ಯಾಬ್ ಡ್ರೈವರ್​​ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆ.16ರಂದು ಸಂಜೆ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ಅಧಿಕಾರಿಗಳು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರೀ ವೈರಲ್​​ ಆಗುತ್ತಿದೆ.

ಸಿಸಿಟಿವಿ ವೀಡಿಯೋದಲ್ಲಿ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಮಹಿಳೆ ಕುಳಿತಿರುವುದು ಕಂಡುಬಂದಿದೆ. ಕ್ಯಾಬ್​​ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದು, ಈ ವೇಳೆ ಅಲ್ಲಿದ್ದ ಕ್ಯಾಬ್​ ಡ್ರೈವರ್​​​ ಆಕೆಯನ್ನು ಹಿಡಿದುಕೊಂಡಿದ್ದಾನೆ. ಬಳಿಕ ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. @CPMumbaiPolice ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇಂದು (ಆ.17) ಬೆಳಗ್ಗೆ 1.47ಕ್ಕೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 3ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Tags:
error: Content is protected !!