ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ಕಾರು ಚಾಲಕ ಮತ್ತು ಪೊಲೀಸರು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾರೆ. ಆದರೆ ಮಹಿಳೆಯನ್ನು ಕ್ಯಾಬ್ ಡ್ರೈವರ್ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆ.16ರಂದು ಸಂಜೆ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ಅಧಿಕಾರಿಗಳು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ಸಿಸಿಟಿವಿ ವೀಡಿಯೋದಲ್ಲಿ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಮಹಿಳೆ ಕುಳಿತಿರುವುದು ಕಂಡುಬಂದಿದೆ. ಕ್ಯಾಬ್ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದು, ಈ ವೇಳೆ ಅಲ್ಲಿದ್ದ ಕ್ಯಾಬ್ ಡ್ರೈವರ್ ಆಕೆಯನ್ನು ಹಿಡಿದುಕೊಂಡಿದ್ದಾನೆ. ಬಳಿಕ ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. @CPMumbaiPolice ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಂದು (ಆ.17) ಬೆಳಗ್ಗೆ 1.47ಕ್ಕೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 3ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…
ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು…
ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ…
ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್…
ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…
ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…