ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ಕಾರು ಚಾಲಕ ಮತ್ತು ಪೊಲೀಸರು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾರೆ. ಆದರೆ ಮಹಿಳೆಯನ್ನು ಕ್ಯಾಬ್ ಡ್ರೈವರ್ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆ.16ರಂದು ಸಂಜೆ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ಅಧಿಕಾರಿಗಳು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ಸಿಸಿಟಿವಿ ವೀಡಿಯೋದಲ್ಲಿ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಮಹಿಳೆ ಕುಳಿತಿರುವುದು ಕಂಡುಬಂದಿದೆ. ಕ್ಯಾಬ್ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದು, ಈ ವೇಳೆ ಅಲ್ಲಿದ್ದ ಕ್ಯಾಬ್ ಡ್ರೈವರ್ ಆಕೆಯನ್ನು ಹಿಡಿದುಕೊಂಡಿದ್ದಾನೆ. ಬಳಿಕ ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. @CPMumbaiPolice ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಂದು (ಆ.17) ಬೆಳಗ್ಗೆ 1.47ಕ್ಕೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 3ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ…
ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು…
ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಸರಣಿ ಕಳ್ಳತನದಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಗ್ರಾಮದ ಹಲವು ಜಮೀನುಗಳಲ್ಲಿ ಹತ್ತಕ್ಕೂ ಹೆಚ್ಚು ಮೋಟಾರ್ಗಳ ಕೇಬಲ್ಗಳನ್ನು…
ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ವಹಿವಾಟು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸೈಬರ್ ವಂಚನೆಗಳೂ ಹೆಚ್ಚುತ್ತಿವೆ.…
ವರ್ಷಕ್ಕೊಮ್ಮೆ ಅವಕಾಶ ಸಿಗುವ ಹಾಸನಾಂಬೆ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಮಧ್ಯೆ ಹಾಸನ ಜಿಲ್ಲಾಡಳಿತ ಮತ್ತು ದೇವಾಲಯದ…
ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾದ ನಾಡಧ್ವಜಕ್ಕೆ ಇದುವರೆಗೂ ಅಧಿಕೃತ ಸ್ಥಾನಮಾನ ದೊರೆಯದಿರುವುದು ನೋವಿನ ಸಂಗತಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಅಲ್ಲಿನ ಧ್ವಜಗಳಿಗೆ…