ದೇಶ- ವಿದೇಶ

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ ಹಾಗೂ ಕ್ಷೇತ್ರಗಳ ಪುನರ್‌ವಿಂಗಡಣಾ ಆಯೋಗವನ್ನು ಸ್ಥಾಪಿಸುವ ಮಸೂದೆಗಳ ಮೇಲೆ ಲೋಕಸಭೆಯಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ ಎಂದು ಸ್ಪೀಕರ್‌ ಓಂ ಬಿರ್ಲಾ ಪ್ರಕಟಿಸಿದ್ದಾರೆ.

ಈ ಮಸೂದೆಗಳ ಕುರಿತು ಸುಮಾರು 15ರಿಂದ 18 ಗಂಟೆಗಳ ಕಾಲ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು ಮಸೂದೆಗಳ ಮೇಲೆ 12 ಗಂಟೆಗಳ ಕಾಲ ಚರ್ಚೆ ನಡೆಸುವಂತೆ ಸಲಹೆ ನೀಡಿದ್ದರು.

ಇದಕ್ಕೂ ಮುನ್ನ ಮಹಿಳಾ ಮೀಸಲಾತಿ ತಿದ್ದುಪಡಿ ಹಾಗೂ ಕ್ಷೇತ್ರ ಮರುವಿಂಗಡಣಾ ಆಯೋಗ ಸ್ಥಾಪನೆಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ಈ ವೇಳೆ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದವು.

ಮಸೂದೆ ಜಾರಿಗೆ ಬಂದರೆ, ಲೋಕಸಭೆಯ 543 ಸ್ಥಾನಗಳಲ್ಲಿ ಸುಮಾರು 181 ಸ್ಥಾನಗಳು ಮಹಿಳೆಯರಿಗೆ ಮೀಸಲಾಗುವ ಸಾಧ್ಯತೆ ಇದೆ. ಅದೇ ರೀತಿ ರಾಜ್ಯ ವಿಧಾನಸಭೆಗಳಲ್ಲೂ ಮೀಸಲಾತಿ ಅನ್ವಯವಾಗಲಿದೆ.

ಮಸೂದೆಯ ಮೇಲಿನ ಚರ್ಚೆಯ ನಂತರ ಶುಕ್ರವಾರ ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago