ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10 ಲಕ್ಷ ರೂ ದಂಡ ವಿಧಿಸಿದೆ.
2026ರ ಮಾರ್ಚ್.15ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ರಿತೇಶ್ ಕುಮಾರ್ ಸಿಂಗ್ ಎಂಬ ಪ್ರಯಾಣಿಕರಿಗೆ ರಾತ್ರಿಯ ಊಟದ ಸಮಯದಲ್ಲಿ ಮೊಸರು ಮತ್ತು ದಾಲ್ ನೀಡಲಾಗಿತ್ತು. ಆ ಮೊಸರಿನ ಕಪ್ ತೆರೆದಾಗ ಅದರಲ್ಲಿ ಜೀವಂತ ಹುಳುಗಳು ಹರಿದಾಡುತ್ತಿರುವುದು ಕಂಡು ಬಂದಿದೆ.
ತಕ್ಷಣವೇ ಅವರು ಈ ಬಗ್ಗೆ ರೈಲಿನಲ್ಲಿದ್ದ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಪ್ರಯಾಣಿಕರು ಹುಳುಗಳನ್ನು ತೋರಿಸಿದಾಗ ಅಲ್ಲಿನ ಸಿಬ್ಬಂದಿ ಅದನ್ನು ಒಪ್ಪಿಕೊಳ್ಳದೇ ಅದು ಹುಳುಗಳಲ್ಲ. ಕೇಸರಿ ಎಂದು ನಂಬಿಸಲು ಪ್ರಯತ್ನಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು, ಹುಳುಗಳು ಜೀವಂತವಾಗಿ ಚಲಿಸುತ್ತಿರುವುದುನ್ನು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಪಾಸಣೆಯ ವೇಳೆ ಆ ಮೊಸರು ಈಗಾಗಲೇ ಅವಧಿ ಮೀರಿರುವುದು ಕೂಡ ಪತ್ತೆಯಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ರೈಲ್ವೆ ಸಚಿವಾಲಯ ಎಚ್ಚೆತ್ತುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಣೆ ಮಾಡಿದೆ.
ಆಹಾರದ ಮೇಲ್ವಿಚಾರಣೆಯಲ್ಲಿ ವೈಫಲ್ಯ ಕಂಡಿದ್ದಕ್ಕಾಗಿ ಐಆರ್‌ಸಿಟಿಸಿಗೆ 10 ಲಕ್ಷ ರೂ ದಂಡ ವಿಧಿಸಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…