ಹೊಸದಿಲ್ಲಿ: ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ ವಾಸದೇವನ್ ನಾಯರ್ (91) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.
ಇವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕೇರಳ ಸಿಎಂ ಪಿಣರಾಯ್ ವಿಜಯನ್ ಸೇರಿದಂತೆ ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಲಯಾಳಂನ ಹೆಸರಾಂತ ಲೇಖಕರಾದ ಎಂ.ಟಿ ವಾಸುದೇವನ್ ನಾಯರ್ ಅವರ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ. ಅವರ ಬರಹಗಳಲ್ಲಿ ಗ್ರಾಮೀಣ ಭಾರತ ಜೀವಂತವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ಎಂ.ಟಿ ವಾಸುದೇವನ್ ನಾಯರ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಮಲಯಾಳಂ ಸಾಹಿತ್ಯ ಮತ್ತು ಚಿತ್ರರಂಗದ ಗೌರವಾನ್ವಿತ ವ್ಯಕ್ತಿ ಇವರು. ಅನೇಕರಿಗೆ ಸ್ಫೂರ್ತಿ ನೀಡುವ ಇವರು ಅನ್ವೇಷಣೆಗಳ ಮೂಲಕ ಹಿಂದಿನ ಪೀಳಿಗೆಯನ್ನು ರೂಪಿಸಿದ್ದಾರೆ. ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಸಾಮಾಜಿಕ್ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ಎಂ.ಟಿ ವಾಸುದೇವನ್ ನಾಯರ್ ಅವರು ತಮ್ಮ ಕೃತಿಗಳ ಮೂಲಕ ಕೇರಳದ ಬದುಕಿನ ಸೌಂದರ್ಯ ಮತ್ತು ಸಂಕೀರ್ಣತೆಗಳನ್ನು ಸಮರ್ಥವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪೊಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.





