Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ

ನವದೆಹಲಿ: ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತೆ ಯಾಮಿನಿ ಕೃಷ್ಣಮೂರ್ತಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಕಳೆದ 7 ತಿಂಗಳಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ತಡರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಆಂಧ್ರಪ್ರದೇಶ ಮೂಲದವರಾದ ಯಾಮಿನಿ, ಕಳೆದ 2016ರಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಭಾಜನರಾಗಿದ್ದರು.

ಯಾಮಿನಿ ಕೃಷ್ಣಮೂರ್ತಿ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

 

Tags:
error: Content is protected !!