ದೇಶ- ವಿದೇಶ

ಧರ್ಮಾಧಾರಿತ ಮೀಸಲಾತಿ ನೀಡಬಾರದೆಂಬ ಸಾಮಾನ್ಯ ಜ್ಞಾನವಿಲ್ಲದಿರುವುದು ದುರದೃಷ್ಟಕರ: ಶಾಸಕ ಯತ್ನಾಳ್‌

ನವದೆಹಲಿ: ರಾಜ್ಯ ಸರ್ಕಾರಕ್ಕೆ ಧರ್ಮಾಧಾರಿತ ಮೀಸಲಾತಿ ನೀಡಬಾರದೆಂಬ ಸಾಮಾನ್ಯ ಜ್ಞಾನವಿಲ್ಲದಿರುವುದು ದುರದಷ್ಟಕರ ಸಂಗತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, KTTP ಕಾಯ್ದೆಯನ್ನು ತಿದ್ದುಪಡಿ ಮಾಡಿ ಸಿವಿಲ್ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4 % ಮೀಸಲು ನೀಡುತ್ತಿರುವ ಕಾಂಗ್ರೆಸ್ ಪಕ್ಷದ ನಿರ್ಧಾರ ಸಂವಿಧಾನದ ಆಶಯಕ್ಕೆ ವಿರುದ್ಧವಾದದ್ದು. ಈಗಾಗಲೇ ಆಂಧ್ರ ಹಾಗೂ ಕೋಲ್ಕತ್ತಾ ಉಚ್ಚ ನ್ಯಾಯಾಲಯಗಳು ಧರ್ಮಾಧಾರಿತ ಮೀಸಲಾತಿಯನ್ನು ಕೊಡಬಾರದು ಎಂದು ಆದೇಶ ನೀಡಿದೆ. ಮೀಸಲಾತಿಯು ಧರ್ಮದ ಆಧಾರದ ಮೇಲಿರರಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ‘ಮೌಖಿಕ ಸೂಚನೆ’ ನೀಡಿತ್ತು ಎಂದು ಹೇಳಿದ್ದಾರೆ.

ಈ ಹಿಂದೆ 4 % ಮೀಸಲಾತಿ ಎಲ್ಲ ಅಲ್ಪ ಸಂಖ್ಯಾತ ಸಮುದಾಯಗಳಿಗೂ ಅನ್ವಯ ಎಂದು ಹೇಳಿದ್ದ ಕಾಂಗ್ರೆಸ್ ಸರ್ಕಾರ ಈಗ ಕೇವಲ ಮುಸಲ್ಮಾನರಿಗೆ ಮಾತ್ರ ಅನ್ವಯ ಎಂದು ಹೇಳಿರುವುದು ಇವರ ಕುಟಿಲ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿ ಸಾಮಾಜಿಕ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಿಗೆ ನೀಡಬೇಕೆ ಹೊರತು ಧರ್ಮಾಧಾರಿತವಾಗಿ ಕೊಡಬಾರದು ಎಂಬ ಸಾಮಾನ್ಯ ಜ್ಞಾನ ಕಾಂಗ್ರೆಸ್ ನವರಿಗೆ ಇಲ್ಲ ಎಂಬುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ವಿಧಾನಸಭಾ ಬಜೆಟ್ ಅಧಿವೇಶನ ಸಮಯದಲ್ಲಿ ಸಚಿವ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ವಿಚಾರವನ್ನು ಪ್ರಸ್ತಾಪಿಸುತ್ತಿದಾಗ ಸದನದಲ್ಲಿ ಹರಿದಾಡಿದ ಚೀಟಿಯೊಂದರ ಬಗ್ಗೆ ಭಾರೀ ಚರ್ಚೆಯಾಗುತ್ತಿರುವುದರ ಬಗ್ಗೆ ಮಾತನಾಡಿದ ಅವರು, ಆ ಚೀಟಿ ಯಾರು ಕಳಿಸಿದ್ದೆಂದು ಗೊತ್ತಿಲ್ಲ. ಆದರೆ ಹಿರಿಯ ಸಚಿವ ರಾಜಣ್ಣನವರು ಬಹಿರಂಗವಾಗೇ ಹನಿಟ್ರ್ಯಾಪ್ ಪ್ರಯತ್ನ ತನ್ನ ಮೇಲೆ ನಡೆಯುತ್ತಿದೆ ಎಂದಿದ್ದಾರೆ.

ಇನ್ನು ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹನಿಟ್ರ್ಯಾಪ್‌ ಅನ್ನು ಯಾಕೆ ಮಾಡುತ್ತಿದ್ದಾರೆ, ಯಾಕೆ ಬ್ಲ್ಯಾಕ್ ಮೇಲ್ ಪ್ರಯತ್ನ ನಡೆದಿದೆ ಎಂದು ಕರ್ನಾಟಕದ ಜನತೆಗೆ ಗೊತ್ತಾಗಬೇಕು. ಆದರೆ ಅವರ ಮಾತಿನ ಧಾಟಿ ನೋಡಿದರೆ ಕಾಂಗ್ರೆಸ್‌ ಪಕ್ಷದ ಮಂತ್ರಿಯೊಬ್ಬ ಭಾಗಿಯಾಗಿರುವಂತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

58 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

60 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

1 hour ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

1 hour ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

1 hour ago