ಕೊಲ್ಕತ್ತಾ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್ ಸಂತ್ರಸ್ತೆ ಕುರಿತು ಪ್ರಶ್ನೆ ಮಾಡಿದರಲ್ಲದೇ, ಹುಡುಗಿಯರನ್ನ ರಾತ್ರಿ ಹೊತ್ತು ಹೊರಗೆ ಬಿಡದಂತೆ ಖಾಸಗಿ ಕಾಲೇಜುಗಳು ಜವಾಬ್ದಾರಿ ವಹಿಸಬೇಕು ಎಂದು ತಾಕೀತು ಮಾಡಿದರು.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ದೀದಿ, ಕತ್ತಲಾದ ನಂತ್ರ ಹೆಣ್ಣುಮಕ್ಕಳು ಹೊರಗೆ ಹೋಗುವುದನ್ನ ತಡೆಯಬೇಕು ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಇದನ್ನು ಓದಿ : ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ
ವಿದ್ಯಾರ್ಥಿನಿ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದಳು, ಹಾಗಾದ್ರೆ ಅದು ಯಾರ ಜವಾಬ್ದಾರಿ? ತಡರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಈಗ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರನ್ನೂ ಕ್ಷಮಿಸುವ ಮಾತೇ ಇಲ್ಲ, ಪೊಲೀಸರು ಎಲ್ಲ ಕಡೆ ಹುಡುಕುತ್ತಿದ್ದಾರೆ ಎಂದು ತಿಳಿಸಿದರು.
ಮುಂದುವರಿದು.. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ತಮ್ಮ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿ ವಹಿಸಬೇಕು, ರಾತ್ರಿ ಸಂಸ್ಕೃತಿಯ ಬಗ್ಗೆ ಎಚ್ಚರ ವಹಿಸಬೇಕು. ಹೆಣ್ಣುಮಕ್ಕಳನ್ನ ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಮೊದಲು ತಮ್ಮನ್ನ ತಾವು ರಕ್ಷಿಸಿಕೊಳ್ಳಬೇಕು. ಏಕೆಂದ್ರೆ ಇದು ಅರಣ್ಯ ಪ್ರದೇಶ ಎಂದು ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…