ದೇಶ- ವಿದೇಶ

ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ

ಕೊಲ್ಕತ್ತಾ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್‌ ಸಂತ್ರಸ್ತೆ ಕುರಿತು ಪ್ರಶ್ನೆ ಮಾಡಿದರಲ್ಲದೇ, ಹುಡುಗಿಯರನ್ನ ರಾತ್ರಿ ಹೊತ್ತು ಹೊರಗೆ ಬಿಡದಂತೆ ಖಾಸಗಿ ಕಾಲೇಜುಗಳು ಜವಾಬ್ದಾರಿ ವಹಿಸಬೇಕು ಎಂದು ತಾಕೀತು ಮಾಡಿದರು.

ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ದೀದಿ, ಕತ್ತಲಾದ ನಂತ್ರ ಹೆಣ್ಣುಮಕ್ಕಳು ಹೊರಗೆ ಹೋಗುವುದನ್ನ ತಡೆಯಬೇಕು ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದನ್ನು ಓದಿ : ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ

ವಿದ್ಯಾರ್ಥಿನಿ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದಳು, ಹಾಗಾದ್ರೆ ಅದು ಯಾರ ಜವಾಬ್ದಾರಿ? ತಡರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಈಗ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರನ್ನೂ ಕ್ಷಮಿಸುವ ಮಾತೇ ಇಲ್ಲ, ಪೊಲೀಸರು ಎಲ್ಲ ಕಡೆ ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಮುಂದುವರಿದು.. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ತಮ್ಮ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿ ವಹಿಸಬೇಕು, ರಾತ್ರಿ ಸಂಸ್ಕೃತಿಯ ಬಗ್ಗೆ ಎಚ್ಚರ ವಹಿಸಬೇಕು. ಹೆಣ್ಣುಮಕ್ಕಳನ್ನ ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಮೊದಲು ತಮ್ಮನ್ನ ತಾವು ರಕ್ಷಿಸಿಕೊಳ್ಳಬೇಕು. ಏಕೆಂದ್ರೆ ಇದು ಅರಣ್ಯ ಪ್ರದೇಶ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 hour ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago