ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.
ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ ವೇಳೆ ಯುವ ಕಾಂಗ್ರೆಸ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆಗೆ ಸಂಬಂಧಿಸಿದಂತೆ ಚಿಬ್ ಅವರ ಬಂಧನವಾಗಿದೆ.
ಪ್ರತಿಭಟನೆಯ ಹಿಂದೆ ಚಿಬ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಪಿತೂರಿ ಹೂಡಲು ಮತ್ತು ಅಗತ್ಯ ವಸ್ತುಗಳನ್ನು ಒದಗಿಸಲು ನೆರವಾಗಿದ್ದಾರೆ ಎಂದು ಪೊಲೀಸರು ವಾದಿಸಿದ್ದಾರೆ.
ತಾವು ತನಿಖೆಗೆ ಈಗಾಗಲೇ ಸಹಕರಿಸುತ್ತಿರುವುದಾಗಿ ಮತ್ತು ಕಸ್ಟಡಿಯ ಅಗತ್ಯವಿಲ್ಲ ಎಂದು ಚಿಬ್ ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನ್ಯಾಯಾಲಯವು ಚಿಬ್ ಅವರ ಕಸ್ಟಡಿಗೆ ಸಂಬಂಧಿಸಿದ ಆದೇಶವನ್ನು ಪ್ರಸ್ತುತ ಕಾಯ್ದಿರಿಸಿದೆ ಎಂದು ವರದಿಯಾಗಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…