ನವದೆಹಲಿ: ಶುಕ್ರವಾರ(ಸೆ.20) ಹ್ಯಾಕ್ ಆಗಿದ್ದ ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ಸೇವೆಗಳು ಪುನಾರಾರಂಭಗೊಂಡಿವೆ.
ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ನ್ನು ಶುಕ್ರವಾರ ಹ್ಯಾಕ್ ಮಾಡಿ, ಅಮೇರಿಕಾ ಮೂಲದ ರಿಪಲ್ಸ್ ಲ್ಯಾಂಪ್ ಎಂಬ ಕಂಪನಿ ಅಭಿವೃದ್ಧಿಪಡಿಸಿದ ಕ್ರಿಪ್ಟೊಕರೆನ್ಸಿಯ ವಿಡಿಯೋಗಳು ಅಪ್‌ಲೋಡ್ ಆಗಿದ್ದವು. ಬಳಿಕ ಚಾನಲ್ ಹ್ಯಾಕ್ ಆಗಿರುವ ಬಗ್ಗೆ ದೃಢಪಡಿಸಿದ ಕೋರ್ಟ್ ಚಾನಲ್ ಅನ್ನು ಸ್ಥಗಿತಗೊಳಿಸಿತ್ತು.
ಇದೀಗ, ಹ್ಯಾಕ್ ಸಮಸ್ಯೆಯನ್ನು ಬಗೆಹರಿಸಿದ್ದು, ಚಾನಲ್ ಸೇವೆಯನ್ನು ಆರಂಭಿಸಲಾಗುತ್ತಿದೆ ಎಂದು ಕೋರ್ಟ್ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.
ಸಂವಿಧಾನ ಪೀಠಗಳ ಮುಂದಿರುವ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯ ನೇರ ಪ್ರಸಾರಕ್ಕಾಗಿ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನಲ್ ಅನ್ನು ಬಳಸುತ್ತಿದೆ.
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…