ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು ನಾನು ನನ್ನ ರಾಜೀನಾಮೆಯನ್ನು ರಾಜ್ಯಸಭೆ ಸಭಾಪತಿ ಅವರಿಗೆ ಸಲ್ಲಿಸಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ.
ಇನ್ನು ನಾನು ಯಾವುದೇ ರಾಜೀಯ ಪಕ್ಷವನ್ನು ಸೇರುತ್ತಿಲ್ಲ. ಯಾವುದೇ ಹುದ್ದೆ, ಲಾಭ ಅಥವಾ ಹಣದ ಆಸೆಗಾಗಿಯೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಇದು ಸಂಪೂರ್ಣ ನನ್ನ ವೈಯಕ್ತಿಕ ನಿರ್ಧಾರವಾಗಿದ್ದು, ಯಾವುದೇ ಒತ್ತಡ ಅಥವಾ ಬೆದರಿಕೆ ಇಲ್ಲ ಎಂದು ಹೇಳಿದ್ದಾರೆ.