ದೇಶ- ವಿದೇಶ

ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ವೈಎಸ್‌ಆರ್‌ಸಿಪಿ ನಾಯಕ ವಿಜಯಸಾಯಿ ರೆಡ್ಡಿ

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು ನಾನು ನನ್ನ ರಾಜೀನಾಮೆಯನ್ನು ರಾಜ್ಯಸಭೆ ಸಭಾಪತಿ ಅವರಿಗೆ ಸಲ್ಲಿಸಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ.

ಇನ್ನು ನಾನು ಯಾವುದೇ ರಾಜೀಯ ಪಕ್ಷವನ್ನು ಸೇರುತ್ತಿಲ್ಲ. ಯಾವುದೇ ಹುದ್ದೆ, ಲಾಭ ಅಥವಾ ಹಣದ ಆಸೆಗಾಗಿಯೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಇದು ಸಂಪೂರ್ಣ ನನ್ನ ವೈಯಕ್ತಿಕ ನಿರ್ಧಾರವಾಗಿದ್ದು, ಯಾವುದೇ ಒತ್ತಡ ಅಥವಾ ಬೆದರಿಕೆ ಇಲ್ಲ ಎಂದು ಹೇಳಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

7 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

50 mins ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

3 hours ago