ವರನಟ ರಾಜ್‌ಕುಮಾರ್ ಕುಟುಂಬದಲ್ಲಿ ವಿಚ್ಛೇದನ ಬಿರುಗಾಳಿ ಎದ್ದಿದೆ. ದೊಡ್ಮನೆ ಕುಡಿ ಯುವರಾಜ್ ಕುಮಾರ್ ಅವರು ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಅವರ ಪರ ವಕೀಲರು ಯುವ ಪತ್ನಿ ಶ್ರೀದೇವಿ ವಿರುದ್ಧ ಹಲವಾರು ಆರೋಪ ಮಾಡಿದ್ದಾರೆ.
ಯುವ ರಾಜ್‌ಕುಮಾರ್ ಅವರಿಗೆ ಅವರ ಪತ್ನಿ ಶ್ರೀದೇವಿ ಅವರು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ನಿನ್ನ ಮಾನವನ್ನು ಬೀದಿಗೆ ಹರಾಜು ಹಾಕುತ್ತೇನೆ ಎಂದು ಬೆದರಿಸುತ್ತಿದ್ದಾರೆ. ರಾಜ್‌ಕುಮಾರ್ ಅಕಾಡೆಮಿಯಿಂದ ವೈಯಕ್ತಿಕ ಖಾತೆಗೆ 3 ಕೋಟಿ ರೂಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಅಮೇರಿಕಾಕ್ಕೆ ತೆರಳಿ ಬಾಯ್‌ಫ್ರೆಂಡ್ ಮೂಲಕ ಮಗು ಪಡೆಯುವ ಯೋಜನೆಯಲಿದ್ದಾರೆ ಅವರಿಗೆ ರಾಧಯ್ಯ ಎಂಬ ಬಾಯ್‌ಫ್ರೆಂಡ್ ಇದ್ದಾರೆ ಎಂದು ಆರೋಪಿಸಿದ್ದರು.
ಇನ್ನು ಈ ಎಲ್ಲಾ ಆರೋಪಗಳಿಗೆ ಪೋಸ್ಟ್ ಮೂಲಕ ತಿರುಗೇಟು ನೀಡಿದ್ದಾರೆ. “ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ.
ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ.
ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ” ಎಂದು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…