ದೇಶ- ವಿದೇಶ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ ; ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಕಾರ್ಟೇ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ನಿರ್ದೇಶಕರ ಸಂಸ್ಥೆ (IOD) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪರಿಸರ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯ 26ನೇ ಅಂತಾರಾಷ್ಟ್ರೀಯ ಸಮ್ಮೇಳನ (ICEM) ದಲ್ಲಿ ಪ್ರಧಾನ ಭಾಷಣ ಮಾಡಿದ ಸಚಿವರು; ಇಂಗಾಲ ಹೊರಸುವಿಕೆ ತಡೆಯುವಲ್ಲಿ ದೊಡ್ಡ ಕೊಡುಗೆ ನೀಡಿರುವ ಕೈಗಾರಿಕೆ ಕಂಪನಿಗಳಿಗೆ ‘IOD ಗೋಲ್ಡನ್ ಪೀಕಾಕ್’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಅಲ್ಲದೆ, ದೇಶದ ಪ್ರಗತಿ, ಆರ್ಥಿಕ ವೃದ್ಧಿಯಲ್ಲಿ ಕಾರ್ಪೊರೇಟ್ ಕಾರ್ಯತಂತ್ರದ ಮೂಲದಲ್ಲಿ ಗಂಭೀರ ಹಾಗೂ ದೂರಗಾಮಿ ಸುಸ್ಥಿರತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಉದ್ಯಮದ ನಾಯಕರಿಗೆ ಸಚಿವರು ಕರೆ ನೀಡಿದರು.

ಜಾಗತಿಕ ಸಂಚಿತ ಹಸಿರುಮನೆ ಅನಿಲ ಹೊರಸೂಸುವಿಕೆಗೆ ಕೇವಲ 4% ಕೊಡುಗೆ ನೀಡುತ್ತಿದ್ದರೂ, ಭಾರತವು ತನ್ನ ಹವಾಮಾನ ಬದ್ಧತೆಗಳ ಕಡೆಗೆ ದೃಢನಿಶ್ಚಯದ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಸಚಿವರು ಹೇಳಿದರು.

“ಭಾರತದ ತಲಾ ಇಂಗಾಲ ಹೊರಸೂಸುವಿಕೆ ಕೇವಲ 1.89 ಟನ್‌ಗಳಾಗಿದ್ದು, ಇದು ಜಾಗತಿಕ ಸರಾಸರಿಗಿಂತ ಅರ್ಧಕ್ಕಿಂತ ಕಡಿಮೆ. ಆದರೂ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, 2030ರ ವೇಳೆಗೆ 500 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ಮತ್ತು 2070ರ ವೇಳೆಗೆ ನಿವ್ವಳ ಶೂನ್ಯವನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಚಿವರು ಒತ್ತಿ ಹೇಳಿದರು.

ಭಾರತದ ಕೈಗಾರಿಕಾ ವಲಯದಾದ್ಯಂತ ಪರಿಸರ ನಿರ್ವಹಣೆ, ಪರಿಸರ-ನಾವೀನ್ಯತೆ ಮತ್ತು ಔದ್ಯೋಗಿಕ ಸುರಕ್ಷತೆಗೆ ಅತ್ಯುತ್ತಮ ಕೊಡುಗೆಗಳನ್ನು ಗೋಲ್ಡನ್ ಪೀಕಾಕ್ ಪ್ರಶಸ್ತಿಗಳು ಗುರುತಿಸಿವೆ ಎಂದ ಸಚಿವರು; ಖಾಸಗಿ ವಲಯವು ನಾವೀನ್ಯತೆ ಮತ್ತು ಹಸಿರು ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ದಿಟ್ಟ, ದೀರ್ಘಕಾಲೀನ ಪಣತೊಡಬೇಕೆಂದು ನುಡಿದರು.

ಈ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು, ಹಿರಿಯ ಅಧಿಕಾರಿಗಳು ಮತ್ತು ಕೈಗಾರಿಕೆ, ಶೈಕ್ಷಣಿಕ ಮತ್ತು ಬಹುಪಕ್ಷೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

9 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

9 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

10 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

10 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

10 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

10 hours ago