ಮುಂಬೈ, – ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಜಿಲ್ಲೆಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧರಾಶಿವ್ ಎಂದು ಬದಲಾಯಿಸುವ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ.
ಕೆಲ ತಿಂಗಳ ಹಿಂದೆ ಕೇಳಿ ಬಂದಿದ್ದ ಸಲಹೆ, ಆಕ್ಷೇಪಣೆಗಳನ್ನು ಪರಿಗಣಿಸಿ ಉಪವಿಭಾಗ, ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹೆಸರು ಬದಲಾವಣೆಗೆ ನಿರ್ಧರಿಸಲಾಗಿದೆ ಎಂದು ಕಂದಾಯ ಇಲಾಖೆ ಅಧಿಸೂಚನೆ ಹೊರಡಿಸಿದೆ.ಕಳೆದ ಜೂನ್ 29ರಂದು ಅವರು ರಾಜೀನಾಮೆ ನೀಡುವ ಮೊದಲು ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿಂದಿನ ಮಹಾ ವಿಕಾಸ್ ಅಘಾಡಿ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಅನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.ಆದರೆ, ಒಂದು ದಿನದ ನಂತರ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ -ಫಡ್ನವಿಸ್ ಅವರು, ಠಾಕ್ರೆ ನೇತೃತ್ವದ ಸಂಪುಟವು ಈ ಸ್ಥಳಗಳನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಾನೂನುಬಾಹಿರ ಎಂದು ಹೇಳಿದ್ದರು.
ಕಳೆದ ವರ್ಷ ಜುಲೈನಲ್ಲಿ ಶಿಂಧೆ ಸರ್ಕಾರವು ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿತು.