Mysore
20
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ʼವರ್ಮʼ ತಲೆ ಕಡಿದರೆ ೧ಕೋಟಿ ಬಹುಮಾನ: ಟಿಡಿಪಿ ಮುಖ್ಯಸ್ಥ

ಅಮರಾವತಿ: ಅಂಡರ್ ವರ್ಲ್ಡ್ ಹಾಗೂ ಮಾಸ್ ಚಿತ್ರಗಳಿಗೆ ಹೆಸರಾದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ತಲೆ ಕಡಿದು ತಂದವರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ತೆಲುಗು ದೇಶಂ ಪಕ್ಷ  ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು  ಹೇಳಿಕೆ ನೀಡಿದ್ದಾರೆ.

ರಾಮ್ ಗೋಪಾಲ್ ವರ್ಮಾ ನಿರ್ದೇಶನದ ವ್ಯೂಹಂ ಸಿನಿಮಾ ರಿಲೀಸ್ ಮಾಡದಂತೆ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತಂತೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು, ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.

ವ್ಯೂಹಂ ಸಿನಿಮಾ ಆಂಧ್ರದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು  ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ರಾಮ್ ಗೋಪಾಲ್ ವರ್ಮಾ, ಕೋಳಿಕಪುಡಿ ಶ್ರೀನಿವಾಸ್ ನಾಯ್ಡು ವಿರುದ್ಧ ಆಂಧ್ರಪ್ರದೇಶ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!