ಅಮರಾವತಿ: ಅಂಡರ್ ವರ್ಲ್ಡ್ ಹಾಗೂ ಮಾಸ್ ಚಿತ್ರಗಳಿಗೆ ಹೆಸರಾದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ತಲೆ ಕಡಿದು ತಂದವರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ತೆಲುಗು ದೇಶಂ ಪಕ್ಷ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು ಹೇಳಿಕೆ ನೀಡಿದ್ದಾರೆ.
ರಾಮ್ ಗೋಪಾಲ್ ವರ್ಮಾ ನಿರ್ದೇಶನದ ವ್ಯೂಹಂ ಸಿನಿಮಾ ರಿಲೀಸ್ ಮಾಡದಂತೆ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತಂತೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು, ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.
ವ್ಯೂಹಂ ಸಿನಿಮಾ ಆಂಧ್ರದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ರಾಮ್ ಗೋಪಾಲ್ ವರ್ಮಾ, ಕೋಳಿಕಪುಡಿ ಶ್ರೀನಿವಾಸ್ ನಾಯ್ಡು ವಿರುದ್ಧ ಆಂಧ್ರಪ್ರದೇಶ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್…
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…
ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…
ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…