ಕಳೆದ ವಾರ ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಾಗಿದೆ. ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ನಿನ್ನೆ ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಎರಡೇ ದಿನಗಳಲ್ಲಿ ಒಟ್ಟು 141 ಸಂಸದರ ಅಮಾನತು ಜರುಗಿತ್ತು.
ಇದೀಗ ಇಂದು ( ಡಿಸೆಂಬರ್ 20 ) ಮತ್ತಿಬ್ಬರು ಸಂಸದರ ಅಮಾನತಾಗಿದ್ದು, ಅಮಾನತಾದ ಸಂಸದರ ಸಂಖ್ಯೆ 143ಕ್ಕೆ ಏರಿಕೆ ಕಂಡಿದೆ. ಸೋಮವಾರ 92 ಸದಸ್ಯರ ಅಮಾನತಾಗಿರುವುದು ಇತಿಹಾಸದಲ್ಲಿಯೇ ದಿನವೊಂದರಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಅಮಾನತಾದ ದಾಖಲೆ ಬರೆದಿದೆ. 1989ರಲ್ಲಿ ಒಂದೇ ದಿನ ಒಟ್ಟು 63 ಸಂಸದರ ಸಂಸದರನ್ನು ಅಮಾನತು ಮಾಡಲಾಗಿತ್ತು. ನಿನ್ನೆ ನಡೆದ ಅಮಾನತು ಪ್ರಕ್ರಿಯೆ ಈ ದಾಖಲೆಯನ್ನು ಹಿಂದಿಕ್ಕಿದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…