Mysore
33
few clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಪೂಂಚ್‌ನಲ್ಲಿ ಸೇನಾ ಟ್ರಕ್‌ ಮೇಲೆ ಉಗ್ರರ ದಾಳಿ; ಮೂವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಇಂದು ( ಡಿಸೆಂಬರ್‌ 21 ) ಉಗ್ರರು ಹೊಂಚು ದಾಳಿ ನಡೆಸಿದ್ದು, ಸೇನಾ ಟ್ರಕ್‌ ಮೇಲೆ ಗುಂಡು ಹಾರಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಸೇನೆಯ ಮೇಲೆ ಈ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದ್ದು, ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಧ್ಯಾಹ್ನ 3.45ರ ಸಮಯಕ್ಕೆ ರಜೌರಿಯ ಪೂಂಚ್‌ ಪ್ರದೇಶದಲ್ಲಿ ಹಾದು ಹೋಗುತ್ತಿದ್ದ ಎರಡು ಸೇನಾ ಟ್ರಕ್‌ಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಎನ್‌ಕೌಂಟರ್‌ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಪೂಂಚ್ ಪ್ರದೇಶ ಭಯೋತ್ಪಾದಕರ ತಾಣವಾಗಿದ್ದು, ಕಳೆದ ಎರಡು ವರ್ಷಗಳಲ್ಲಿ ಇದೇ ಪ್ರದೇಶದಲ್ಲಿ ಉಗ್ರರ ಜತೆಗಿನ ಕಾದಾಟದಲ್ಲಿ ಒಟ್ಟು 35 ಯೋಧರು ಹುತಾತ್ಮರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!