Mysore
24
mist

Social Media

ಗುರುವಾರ, 12 ಡಿಸೆಂಬರ್ 2024
Light
Dark

ಆಹಾರ ಕ್ಷೇತ್ರಕ್ಕೆ ಹರಿದುಬಂದಿದೆ 50 ಸಾವಿರ ಕೋಟಿ ಎಫ್‍ಡಿಐ: ಪ್ರಧಾನಿ ಮೋದಿ

ನವದೆಹಲಿ (ಪಿಟಿಐ) : ಭಾರತದ ಆಹಾರ ಸಂಸ್ಕರಣಾ ಕ್ಷೇತ್ರವು ಸೂರ್ಯೋದಯ ಉದ್ಯಮವಾಗಿ ಹೊರಹೊಮ್ಮಿದೆ ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ 50,000 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‍ಡಿಐ) ಆಕರ್ಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ವಲ್ಡರ್ ಫುಡ್ ಇಂಡಿಯಾದ ಎರಡನೇ ಆವೃತ್ತಿಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಮೂರು ದಿನಗಳ ಈ ಕಾರ್ಯಕ್ರಮ ನ.5 ರಂದು ಮುಕ್ತಾಯಗೊಳ್ಳಲಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಆಹಾರ ಸಂಸ್ಕರಣಾ ವಲಯಕ್ಕೆ 50,000 ಕೋಟಿ ರೂಪಾಯಿಗಳ ಎಫ್‍ಡಿಐ ಬಂದಿದೆ. ಇದು ಸರ್ಕಾರದ ಕೈಗಾರಿಕೆ ಮತ್ತು ರೈತರ ಪರವಾದ ನೀತಿಗಳ ಪರಿಣಾಮವಾಗಿದೆ ಎಂದು ಮೋದಿ ಹೇಳಿದರು.

ಕಳೆದ ಒಂಬತ್ತು ವರ್ಷಗಳಲ್ಲಿ ಸಂಸ್ಕರಿಸಿದ ಆಹಾರದ ರಫ್ತು ಶೇ. 150 ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ಸಂಸ್ಕರಣಾ ಸಾಮಥ್ರ್ಯವು ಗಣನೀಯವಾಗಿ ಹೆಚ್ಚಾಗಿದೆ ಎಂದು ಅವರು ಹೇಳಿದರು. ಪ್ರಧಾನ ಮಂತ್ರಿಗಳು ಒಂದು ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಬೀಜ ಬಂಡವಾಳ ಸಹಾಯವನ್ನು ವಿತರಿಸಿದರು ಮತ್ತು ವಿಶ್ವ ಆಹಾರ ಭಾರತ 2023 ಭಾಗವಾಗಿ ಆಹಾರ ಬೀದಿಯನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮ ಭಾರತವನ್ನು ವಿಶ್ವದ ಆಹಾರದ ಬುಟ್ಟಿ ಎಂದು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು 2023 ಅನ್ನು ಅಂತರರಾಷ್ಟ್ರೀಯ ರಾಗಿ ವರ್ಷ ಎಂದು ಆಚರಿಸುತ್ತದೆ. ಮೊದಲ ಆವೃತ್ತಿಯನ್ನು 2017 ರಲ್ಲಿ ನಡೆಸಲಾಯಿತು, ಆದರೆ ಸತತ ವರ್ಷಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ಆಯೋಜಿಸಲಾಗಲಿಲ್ಲ.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪಾರಸ್ ಅವರು ವಿದೇಶಿ ಹೂಡಿಕೆದಾರರು ಈ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿಕೊಂಡರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ