ರಾಷ್ಟ್ರೀಯ

ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್!

ನವದೆಹಲಿ : ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ.

ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಗೆ ಕತಾರ್‌ನ ಪ್ರಥಮ ಹಂತದ ನ್ಯಾಯಾಲಯವು ಗುರುವಾರ ಮರಣದಂಡನೆ ವಿಧಿಸಿತು. ಆದರೆ, ಈ ತೀರ್ಪನ್ನು ಆಘಾತಕಾರಿ ಎಂದು ಭಾರತ ಬಣ್ಣಿಸಿದ್ದು, ಪ್ರಕರಣದಲ್ಲಿ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸಲು ಪ್ರತಿಜ್ಞೆ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈ ಶಂಕರ್, ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಇಂದು ಬೆಳಿಗ್ಗೆ ಭೇಟಿಯಾದೆ.  ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಸರ್ಕಾರ ಎಲ್ಲಾ ಪ್ರಯತ್ನ  ಮುಂದುವರಿಸುತ್ತದೆ. ಈ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಕಂಪನಿ ಅಲ್ ದಹ್ರಾ ಜೊತೆ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಆದರೆ, ಕತಾರ್ ಅಧಿಕಾರಿಗಳಾಗಲಿ ಅಥವಾ ಭಾರತ ಸರ್ಕಾರವಾಗಲಿ ಭಾರತೀಯ ಪ್ರಜೆಗಳ ವಿರುದ್ಧದ ಆರೋಪಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸರಲಿಲ್ಲ.

https://x.com/DrSJaishankar/status/1718845462357406162?s=20

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

8 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago