ಶ್ರೀಲಂಕಾವನ್ನು ಮಣಿಸಿ 8ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಭಾರತ ಯುವಪಡೆ!

ಯುಎಇಯಲ್ಲಿ ನಡೆದ ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ಜಯದ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಯಶ್ ಧುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಅಂಡರ್-19 ಏಷ್ಯಾಕಪ್ ಗೆದ್ದುಕೊಂಡಿದೆ.

ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಮಳೆ ಪೀಡಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 38 ಓವರ್‌ಗಳಲ್ಲಿ 106 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಕೇವಲ ಒಂದು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ, ಭಾರತ ತಂಡವು 38 ಓವರ್‌ಗಳಲ್ಲಿ 102 ರನ್‌ಗಳ ಗುರಿಯನ್ನು ಪಡೆದುಕೊಂಡಿತು, ಅದನ್ನು ಆಂಗ್‌ಕ್ರಿಶ್ ರಘುವಂಶಿ ಮತ್ತು ಶೇಖ್ ರಶೀದ್ ಅವರ ಅತ್ಯುತ್ತಮ ಬ್ಯಾಟಿಂಗ್ ಆಧಾರದ ಮೇಲೆ ಸಾಧಿಸಿದರು.

× Chat with us