ರಾಷ್ಟ್ರೀಯ

ಮಮತ ಬ್ಯಾನರ್ಜಿ ಜೊತೆ ಮಾತನಾಡಿದ ಎಐಸಿಸಿ ಅಧ್ಯಕ್ಷರು !

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ ದಿನಗಳ ಬಳಿಕ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ.

”ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮಮತಾ ಬ್ಯಾನರ್ಜಿಯೊಂದಿಗೆ ಮಾತನಾಡಿದ್ದಾರೆ. ಮುಂದುವರಿಯುವುದು ಹೇಗೆ ಎಂಬ ಬಗ್ಗೆ ನಾವು ನಿರ್ಧಾರವೊಂದಕ್ಕೆ ಬರುತ್ತೇವೆ” ಎಂದು ಕಾಂಗ್ರೆಸ್ ಪಕ್ಷದ ಸಂಪರ್ಕ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯನ್ನು ತನ್ನ ಪಕ್ಷವು ಏಕಾಂಗಿಯಾಗಿ ಎದುರಿಸುವುದು ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಘೋಷಿಸಿದ ಒಂದು ದಿನದ ಬಳಿಕ, ಬಿಕ್ಕಟ್ಟನ್ನು ತಿಳಿಗೊಳಿಸಲು ಖರ್ಗೆ ಗುರುವಾರ ಅವರೊಂದಿಗೆ ಮಾತನಾಡಿದ್ದಾರೆ ಎಂದು ಜೈರಾಮ್ ರಮೇಶ್ ತಿಳಿಸಿದರು.

ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯು ಬಿಹಾರದಲ್ಲಿ ಹಾದು ಹೋಗುವಾಗ ಜನವರಿ 30ರಂದು ಅದರಲ್ಲಿ ಭಾಗವಹಿಸುವಂತೆ ಲಾಲು ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ಗೆ ಖರ್ಗೆ ಮನವಿಯನ್ನೂ ಮಾಡಿದ್ದಾರೆ ಎಂದು ಅವರು ಹೇಳಿದರು.

andolanait

Recent Posts

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 mins ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

2 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

2 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

3 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

3 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

4 hours ago