ಇದೇ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ ಆಯೋಗ ಲೊಕಸಭೆ ಚುನಾವಣೆಗೆ ಸಂಬಂಧಿಸಿದ ಸುತ್ತೋಲೆಯೊಂದನ್ನು ಹೊರಡಿಸಿತ್ತು.
ಈ ಸುತ್ತೋಲೆಯಲ್ಲಿ ಲೋಕಸಭೆ ಚುನಾವಣೆ ಏಪ್ರಿಲ್ 16ರಂದು ನಡೆಯಲಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಕುರಿತು ಹಲವು ಮಾಧ್ಯಮಗಳು ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದು, ಆಯೋಗ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಬರೆದುಕೊಂಡಿದೆ. ಈ ಮೂಲಕ ಸುತ್ತೋಲೆಯಲ್ಲಿದ್ದ ದಿನಾಂಕ ಅಂತಿಮವಲ್ಲ ಎಂಬ ಸ್ಪಷ್ಟನೆಯನ್ನು ಚುನಾವಣಾ ಆಯೋಗ ನೀಡಿದೆ.
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…
ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಗೆ ಇಬ್ಬರು…
ಮೈಸೂರು : ಬಂಡಾಯ ಬರಗೂರು ರಾಮಚಂದ್ರಪ್ಪರ ಮಾತು, ಬರಹದಲ್ಲಿದ್ದರು, ಅವರ ಭಾವಕೋಶವು ಮೃದುತ್ವದ್ದಾಗಿ ಎಲ್ಲ ಕ್ಷೇತ್ರಗಳಲ್ಲೂ ವಿಸ್ತರಿಸಿದೆ. ಈ ನಿಟ್ಟಿನಲ್ಲಿ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು…
ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…
ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…