ರಾಷ್ಟ್ರೀಯ

ಕುರುಕ್ಷೇತ್ರದಲ್ಲಿ ಕೃಷ್ಣನ ಮೂರ್ತಿ ಕೆತ್ತಲಿದ್ದಾರೆ ಬಾಲರಾಮ ಮೂರ್ತಿ ಖ್ಯಾತಿಯ ಅರುಣ್‌ ಯೋಗಿರಾಜ್‌

ಇತ್ತೀಚೆಗಷ್ಟೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಬಾಲರಾಮನ ವಿಗ್ರಹವನ್ನು ನಿರ್ಮಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ದೇಶವ್ಯಾಪಿ ಹೆಸರನ್ನು ಮಾಡಿದ್ದರು.

ಈ ಮಹಾ ಪುಣ್ಯಕ್ಷೇತ್ರಕ್ಕೆ ಅರುಣ್‌ ಯೋಗಿರಾಜ್‌ ಕೆತ್ತಿದ ಬಾಲರಾಮನ ವಿಗ್ರಹ ಆಯ್ಕೆಯಾದದ್ದು ಶಿಲ್ಪಿಗೆ ದೊಡ್ಡಮಟ್ಟದಲ್ಲಿ ಹೆಸರನ್ನು ತಂದುಕೊಟ್ಟಿತ್ತು. ಇದಾದ ಬೆನ್ನಲ್ಲೆ ಇದೀಗ ಅರುಣ್‌ ಯೋಗಿರಾಜ್‌ ಮತ್ತೊಂದು ಮಹಾ ವಿಗ್ರಹದ ನಿರ್ಮಾಣಕ್ಕೆ ಕೈಹಾಕಲು ಮುಂದಾಗಿದ್ದಾರೆ.

ಹೌದು, ಹರಿಯಾಣದ ಕುರುಕ್ಷೇತ್ರದ ಬ್ರಹ್ಮ ಸರೋವರದ ಪೂರ್ವ ದಂಡೆಯಲ್ಲಿ ನಿರ್ಮಾಣವಾಗುತ್ತಿರುವ 18 ಅಂತಸ್ತಿನ ಜ್ಞಾನ ಮಂದಿರದ ಗರ್ಭ ಗುಡಿಯಲ್ಲಿ ಸ್ಥಾಪಿಸಲು ಕೃಷ್ಣನ ವಿಗ್ರಹವನ್ನು ಕೆತ್ತಲು ಅರುಣ್‌ ಯೋಗಿರಾಜ್‌ ಅವರ ಜತೆ ಮಾತುಕತೆ ನಡೆಸಲಾಗಿದೆ ಎಂದು ಬ್ರಹ್ಮಪುರಿ ಅನ್ನಕ್ಷೇತ್ರ ಟ್ರಸ್ಟ್‌ ಜ್ಞಾನ ಮಂದಿರ ಸಂಸ್ಥಾಪಕ ಸ್ವಾಮಿ ಚಿರಂಜೀವಪುರಿ ಮಹಾರಾಜ್‌ ತಿಳಿಸಿದ್ದಾರೆ.

3 ಎಕರೆ ಜಾಗದಲ್ಲಿ 18 ಅಂತಸ್ತಿನ ಜ್ಞಾನ ಮಂದಿರ ನಿರ್ಮಾಣವಾಗುತ್ತಿದ್ದು, ದೇವಾಲಯದ ಗರ್ಭಗುಡಿಯಲ್ಲಿ ಅರ್ಜುನನಿಗೆ ಸಂದೇಶ ನೀಡುತ್ತಿರುವ ಶ್ರೀಕೃಷ್ಣನ ದೈತ್ಯ ರೂಪವನ್ನು ಪ್ರತಿಷ್ಠಾಪಿಸಲಾಗುವುದು. ಇದಕ್ಕಾಗಿ ಅರುಣ್‌ ಯೋಗಿರಾಜ್‌ ಅವರ ಜತೆ ಚರ್ಚೆ ನಡೆಸಲಾಗಿದೆ. ಟ್ರಸ್ಟ್‌ ಸಹ ಯೋಜನೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಅರುಣ್‌ ಯೋಗಿರಾಜ್‌ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸ್ವಾಮಿ ಚಿರಂಜೀವಪುರಿ ಮಹಾರಾಜ್‌ ಹೇಳಿಕೆ ನೀಡಿದ್ದಾರೆ.

ಅಲ್ಲದೇ ಟ್ರಸ್ಟ್‌ನ ಮುಖ್ಯಸ್ಥ ರಾಜೇಶ್‌ ಗೋಯಲ್‌ ಸಹ ಈ ಕುರಿತು ಮಾತನಾಡಿದ್ದು, ಅರುಣ್‌ ಯೋಗಿರಾಜ್‌ ಅವರ ಜತೆ ಚರ್ಚಿಸಿದ ಬಳಿಕ ನೇಪಾಳದ ಗಂಡಕಿ ನದಿಯಲ್ಲಿ ವಿಶೇಷ ಸಾಲಿಗ್ರಾಮ ಶಿಲೆಯನ್ನು ತರಲು ನಿರಂತರವಾಗಿ ಸಂಪರ್ಕಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

andolana

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

4 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

4 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

4 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

4 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

4 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

4 hours ago