ನವದೆಹಲಿ: ಲೋಕಸಭೆಯ ಈ ವರ್ಷದ ಮೊದಲ ಅಧಿವೇಶನದಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ.
ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಿದೆ. ಈ ವರ್ಷದ ಮೊದಲ ಅಧಿವೇಶನ ನಿನ್ನೆಯಿಂದ ಆರಂಭವಾಗಿದ್ದು, ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಿದ್ದಾರೆ.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು, ಲೋಕಸಭೆ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಸಂಸದರಾಗಿದ್ದು, ಈ ನಡುವೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ.
ಅಸಾದುದ್ದೀನ್ ಓವೈಸಿ ಅವರು ಪ್ರಮಾಣ ವಚನ ಸ್ವೀಕಾರದ ನಂತರದಲ್ಲಿ ಜೈ ಭೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೇನ್ ಘೋಷಣೆಗಳನ್ನು ಕೂಗಿದ್ದು, ಇದಕ್ಕೆ ಹಲವು ಸಂಸದರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು, ಓವೈಸಿ ಆಕ್ಷೇಪಾರ್ಹವಾಗಿ ಏನಾದರೂ ಹೇಳಿದ್ದರೆ ಅದನ್ನು ಕಲಾಪದ ದಾಖಲೆಯಿಂದ ತೆಗೆದು ಹಾಕಲಾಗುವುದು ಎಂದು ಹೇಳಿದ್ದಾರೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…