Mysore
18
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಆಯೋಧ್ಯೆ ರಾಮ ಮಂದಿರದಲ್ಲಿ ಸಂಪನ್ನಗೊಂಡ ಬಾಲರಾಮನ ಪ್ರತಿಷ್ಠಾಪನ ಕಾರ್ಯ!

ಅಯೋಧ್ಯೆ : ದೇಶದಲ್ಲಿ ಬಹುಸಂಖ್ಯ ರಾಮ ಭಕ್ತರು  ಕಾತರದಿಂದ ಎದುರು ನೋಡುತ್ತಿದ್ದ ಬಾಲರಾಮನ ಪ್ರತಿಷ್ಠಾಪನೆ ಸಂಪನ್ನಗೊಂಡಿದೆ.

ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾದ ವಿಧಿ-ವಿಧಾನಗಳು ಮುಗಿದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಐತಿಹಾಸಿಕ ಸಮಾರಂಭ ನಡೆದಿದ್ದು, ದೇಶದ ಅನೇಕ ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ. ರಾಮಲಲ್ಲಾನ ಮೊದಲ ದೃಶ್ಯದ ವಿಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಮ್ಮುಖದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೆರವೇರಿದೆ.

ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಈ ಐತಿಹಾಸಿಕ ಕ್ಷಣದಲ್ಲಿ ಭಾಗಿಯಾಗಿದ್ದಾರೆ.

ಹೂವಿನ ಹಾರ ಮತ್ತು ಒಡವೆಗಳಿಂದ ಬಾಲರಾಮನ ವಿಗ್ರಹ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!