ಅಯೋಧ್ಯೆ : ದೇಶದಲ್ಲಿ ಬಹುಸಂಖ್ಯ ರಾಮ ಭಕ್ತರು ಕಾತರದಿಂದ ಎದುರು ನೋಡುತ್ತಿದ್ದ ಬಾಲರಾಮನ ಪ್ರತಿಷ್ಠಾಪನೆ ಸಂಪನ್ನಗೊಂಡಿದೆ.
ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾದ ವಿಧಿ-ವಿಧಾನಗಳು ಮುಗಿದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಐತಿಹಾಸಿಕ ಸಮಾರಂಭ ನಡೆದಿದ್ದು, ದೇಶದ ಅನೇಕ ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ. ರಾಮಲಲ್ಲಾನ ಮೊದಲ ದೃಶ್ಯದ ವಿಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಮ್ಮುಖದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೆರವೇರಿದೆ.
ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಈ ಐತಿಹಾಸಿಕ ಕ್ಷಣದಲ್ಲಿ ಭಾಗಿಯಾಗಿದ್ದಾರೆ.
ಹೂವಿನ ಹಾರ ಮತ್ತು ಒಡವೆಗಳಿಂದ ಬಾಲರಾಮನ ವಿಗ್ರಹ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…