ರಾಷ್ಟ್ರೀಯ

ರಾಮ ಮಂದಿರದಿಂದ 84 ಕಿ.ಮೀ ದೂರದವರೆಗೂ ಮದ್ಯ ಮಾರಾಟ ನಿಷೇಧ!

ಉತ್ತರ ಪ್ರದೇಶ: ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮಮಂದಿರದಿಂದ 84 ಕಿ.ಮೀ ದೂರದವರೆಗೂ ಯಾವುದೇ ಮದ್ಯದಂಗಡಿ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಶ್ರೀರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಯುಪಿ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿ ನೀಡಿದರು. ಅಯೋಧ್ಯೆಯ 84 ಕೋಸಿ ಪರಿಕ್ರಮ ಮಾರ್ಗವನ್ನು ಮದ್ಯ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೆ ಅದಾಗಲೇ ಇರುವ ಮದ್ಯದ ಅಂಗಡಿಗಳನ್ನು ತೆಗೆದುಹಾಕಲಾಗುವುದು ಎಂದರು.

ಅಯೋಧ್ಯೆಯೊಂದಿಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ, ಸುಲ್ತಾನ್‌ಪುರ ಪ್ರದೇಶಗಳನ್ನು ಶ್ರೀರಾಮ ಜನ್ಮಭೂಮಿಯ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಸೇರಿಸಲಾಗುವುದು. ಪರಿಕ್ರಮ ಮಾರ್ಗದಲ್ಲಿ ಮದ್ಯದಂಗಡಿ ಇರುವುದಿಲ್ಲ. ಈಗಾಗಲೇ ಇರುವ ಎಲ್ಲ ಅಂಗಡಿಗಳನ್ನು ತೆಗೆದುಹಾಕಲಾಗುವುದು. ಪರಿಕ್ರಮ ಪ್ರದೇಶದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ವಾಸ್ತವವಾಗಿ, ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಅವರು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿಯಾಗಲು ಬಂದಿದ್ದರು. ಸಭೆಯ ನಂತರ ಮಾತನಾಡಿದ ಅವರು, ಶ್ರೀರಾಮ ಮಂದಿರ ಕ್ಷೇತ್ರವನ್ನು ಈಗಾಗಲೇ ಮದ್ಯ ಮುಕ್ತ ಮಾಡಲಾಗಿದೆ. ಇದೀಗ 84 ಕೋಸ್ ಪರಿಕ್ರಮ ಮಾರ್ಗದಿಂದಲೂ ಮದ್ಯದಂಗಡಿಗಳನ್ನು ತೆಗೆಯಲಾಗುವುದು. ಇದಕ್ಕಾಗಿ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ.

ಇಡೀ ಅಯೋಧ್ಯೆ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಈ ನಿಷೇಧ ಅನ್ವಯಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮಾತ್ರ ಅನ್ವಯಿಸುತ್ತದೆ. ಈ ಭಾಗದಲ್ಲಿ 500ಕ್ಕೂ ಹೆಚ್ಚು ಮದ್ಯದಂಗಡಿಗಳಿವೆ ಎಂದು ಹೇಳಲಾಗುತ್ತಿದೆ. ಮದ್ಯ ನಿಷೇಧದ ಘೋಷಣೆಯ ನಂತರ ಈ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ. ಈ ಕುರಿತು ಅಧಿಕಾರಿಗಳಿಗೆ ಆದೇಶ ಹೊರಡಿಸಲಾಗಿದೆ. ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

9 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

13 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

14 hours ago