ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಏರಿದಾಗಿನಿಂದ ಅಂತರ ಕಾಯ್ದುಕೊಂಡು ವೇದಿಕೆಗಳಲ್ಲಿ ಬಿಎಸ್‌ವೈ ಹಾಗೂ ಬಿವಿವಿ ವಿರುದ್ಧ ವಾಗ್ದಾಳಿ ನಡೆಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಬಿವೈ ವಿಜಯೇಂದ್ರ ಇರುವ ಫೋಟೊದಲ್ಲಿ ಪೋಸ್ ನೀಡುತ್ತಾ ಕುಳಿತಿದ್ದಾರೆ.
ಇಂದು ( ಫೆಬ್ರವರಿ 9 ) ನವದೆಹಲಿಯ ಸಂಸತ್ ಭವನದಲ್ಲಿ ಪ್ರಲ್ಹಾದ್ ಜೋಷಿ ಬಿವೈ ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಬಿವಿ ನಾಯಕ್, ಪಿಸಿ ಮೋಹನ್ ಹಾಗೂ ರಮೇಶ್ ಜಾರಕಿಹೊಳಿ ಸಹ ಈ ಫೋಟೊದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಲ್ಹಾದ್ ಜೋಶಿ ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.