ರಾಷ್ಟ್ರೀಯ

ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ: ಸ್ಮತಿ ಇರಾನಿ

ನವದೆಹಲಿ (ಪಿಟಿಐ) : ಛತ್ತೀಸ್‍ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಅಕ್ರಮ ಬೆಟ್ಟಿಂಗ್ ದಂಧೆಯಿಂದ ಬಂದಿರುವ 500 ಕೋಟಿ ರೂಪಾಯಿ ಹವಾಲಾ ಹಣವನ್ನು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ನಮ್ಮ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಜನರು ಇಂತಹ ಅಕ್ರಮಗಳನ್ನು ಕಂಡಿಲ್ಲ ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದಾರೆ. ಬಘೇ ಲ್ ಅವರು ಜನರ ಬೆಂಬಲದಿಂದ ಚುನಾವಣೆಯನ್ನು ಎದುರಿಸುತ್ತಿದ್ದಾರೆ ಹೊರತು ಹವಾಲಾ ಮತ್ತು ಬೆಟ್ಟಿಂಗ್ ಆಪರೇಟರ್‍ಗಳ ಬೆಂಬಲದಿಂದಲ್ಲ ಎಂದು ಅವರು ಆರೋಪಿಸಿದರು.

ನವೆಂಬರ್ 7 ಮತ್ತು 17 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ತನ್ನನ್ನು ಗುರಿಯಾಗಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ಬಘೇಲೆ ಅವರ ಆರೋಪಕ್ಕೆ ತಿರುಗೇಟು ನೀಡಿದ ಇರಾನಿ ಅವರು ಜಾರಿ ನಿರ್ದೇಶನಾಲಯದ ತನಿಖೆಯು ಛತ್ತೀಸ್‍ಗಢ ಮತ್ತು ಆಂಧ್ರಪ್ರದೇಶದ ಪೊಲೀಸರ ತನಿಖೆಯ ವಿವರಗಳನ್ನು ಆಧರಿಸಿದೆ ಎಂದಿದ್ದಾರೆ.

ತನಿಖೆಯನ್ನು ಉಲ್ಲೇಖಿಸಿ, ಅಕ್ರಮ ಬೆಟ್ಟಿಂಗ್ ಆಪರೇಟರ್‍ಗಳಿಂದ 64 ಕೋಟಿ ರೂ.ಗೂ ಹೆಚ್ಚು ರಕ್ಷಣೆ ಹಣವನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್‍ನ ಪ್ರಚಾರಕ್ಕೆ ಹಣಕ್ಕಾಗಿ ಬೆಟ್ಟಿಂಗ್ ಹಣದ ಬಳಕೆ ಮತ್ತು ಬಘೇಲ್‍ಗೆ ನೀಡಿದ ಕಿಕ್‍ಬ್ಯಾಕ್‍ಗಳ ಬಗ್ಗೆ ಆರೋಪಿಗಳ ಧ್ವನಿ ಸಂದೇಶಗಳು ಮತ್ತು ಹೇಳಿಕೆಗಳಿವೆ ಎಂದು ಅವರು ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಛತ್ತೀಸ್‍ಗಢದ ಮುಖ್ಯಮಂತ್ರಿಗೆ ಇದುವರೆಗೆ ಸುಮಾರು 508 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂಬ ಫೋರೆನ್ಸಿಕ್ ವಿಶ್ಲೇಷಣೆ ಮತ್ತು ಕ್ಯಾಶ್ ಕೊರಿಯರ್ ನೀಡಿದ ಹೇಳಿಕೆಯು ಆಘಾತಕಾರಿ ಆರೋಪಗಳಿಗೆ ಕಾರಣವಾಗಿದೆ ಎಂದು ಇಡಿ ಶುಕ್ರವಾರ ಹೇಳಿಕೊಂಡಿದೆ.

andolanait

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

52 mins ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

4 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

5 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago