ರಾಷ್ಟ್ರೀಯ

ಜನವರಿ 14 ರಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ʼಭಾರತ್ ಜೋಡೋ ನ್ಯಾಯ್ ಯಾತ್ರೆʼ

ನವದೆಹಲಿ: ಜನವರಿ 14 ರಿಂದ ಆರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಮುಂಬೈ-ಮಣಿಪುರ ಯಾತ್ರೆಯನ್ನು ಕಾಂಗ್ರೆಸ್ ಗುರುವಾರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಎಂದು ಮರುನಾಮಕರಣ ಮಾಡಿದೆ.

ಈ ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಾಗಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯ ಘಟಕದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆಯ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ರಾಹುಲ್ ಗಾಂಧಿ ಯಾತ್ರೆಯನ್ನು ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಎಂದು ಮರುನಾಮಕರಣ ಮಾಡಿರುವುದಾಗಿ ಘೋಷಿಸಿದ್ದಾರೆ.

ಇದಕ್ಕು ಮೊದಲು ಭಾರತ್ ನ್ಯಾಯ್ ಯಾತ್ರೆ ಎಂದು ಹೆಸರಿಸಲಾಗಿತ್ತು. ಈ ಯಾತ್ರೆಯಲ್ಲಿ ಭಾಗವಹಿಸುವಂತೆ ಎಲ್ಲಾ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರಿಗೆ ಕಾಂಗ್ರೆಸ್‌ ಆಹ್ವಾನ ನೀಡಲಾಗುವುದು ಎಂದು ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.

6,713 ಕಿ.ಮೀ.ಗೂ ಹೆಚ್ಚು ದೂರ ಸಾಗುವ ಈ ಯಾತ್ರೆಯು ಬಸ್‌ಗಳಲ್ಲಿ ಹಾಗೂ ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಈ ಯಾತ್ರೆಯು 110 ಜಿಲ್ಲೆಗಳು, ಸುಮಾರು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago