ರಾಷ್ಟ್ರೀಯ

ಇಂದಿನಿಂದ ಭಾರತ ಜೋಡೋ ನ್ಯಾಯ ಯಾತ್ರೆ ಆರಂಭ!

ಮುಂಬೈ: ರಾಹುಲ್‌ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ್‌ ಯಾತ್ರೆ ಇಂದಿನಿಂದ (ಜನವರಿ 14) ಮಣಿಪುರದಿಂದ ಆರಂಭವಾಗಲಿದೆ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

ಶನಿವಾರ ಮಣಿಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ನ್ಯಾಯ್‌ ಯಾತ್ರೆಯೂ ಭಾರತ್‌ ಜೋಡೋ ಯಾತ್ರೆಯ ಎರಡನೇ ಹಂತವಾಗಿದೆ. ಇದೊಂದು ರಾಜಕೀಯ ರ್ಯಾಲಿಯಾಗಿದ್ದು, ಚುನಾವಣೆಗೆ ಇದು ಸಂಬಂಧ ಪಡುವುದಿಲ್ಲ. ಈ ಯಾತ್ರೆಯಲ್ಲಿ ಎಲ್ಲಾ ಕಾಂಗ್ರೆಸ್‌ ನಾಯಕರು ಭಾಗವಹಿಸಲಿದ್ದಾರೆ ಎಂದರು.

“ಇದು ಸೈದ್ಧಾಂತಿಕ ಯಾತ್ರೆ, ಚುನಾವಣಾ ಯಾತ್ರೆಯಲ್ಲ. ಇದೊಂದು ರಾಜಕೀಯ ರ್ಯಾಲಿಯಾಗಿದ್ದು, ರಾಜಕೀಯ ಉದ್ದೇಶದಿಂದ ರಾಜಕೀಯ ಪಕ್ಷವೊಂದು ನಡೆಸುತ್ತಿದೆ. ಸಂವಿಧಾನ, ಸಂವಿಧಾನದ ಪೀಠಿಕೆ, ತತ್ವಗಳು-ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ರಕ್ಷಿಸುವುದು ನಮ್ಮ ರಾಜಕೀಯ ಉದ್ದೇಶವಾಗಿದೆ ಎಂದು ರಮೇಶ್ ಹೇಳಿದ್ದಾರೆ.

ಯಾತ್ರೆಯ ಆರಂಭಿಕ ಹಂತವಾಗಿ ಮಣಿಪುರವನ್ನು ಉದ್ದೇಶಪೂರ್ವಕ ಆಯ್ಕೆಯಾಗಿದೆ ಕಾಂಗ್ರೆಸ್ ವಿವಿಧ ಆಯ್ಕೆಗಳನ್ನು ಪರಿಗಣಿಸಿದೆ ಮತ್ತು ಅಂತಿಮವಾಗಿ, “ಇಲ್ಲಿ ಏನಾಯಿತು ಎಂಬುದರ ಬಗ್ಗೆ ನಮ್ಮ ಕಾಳಜಿಯ ಪ್ರತಿಬಿಂಬವಾಗಿ ಮಣಿಪುರದಿಂದ ಪ್ರಾರಂಭಿಸಲು ನಿರ್ಧರಿಸಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago