ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್ʼ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ. ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ʻಭಾರತ್ ಬ್ರ್ಯಾಂಡ್ʼ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‌ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಎಲ್ಲೇಲ್ಲಿ ಮಾರಾಟ?
ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (NAFED), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (NCCF) ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಅಕ್ಕಿ ಮಾರಾಟಕ್ಕೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‌ಗಳಷ್ಟು ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…