ರಾಷ್ಟ್ರೀಯ

ಐಟಿಯಿಂದ ಸಾವಿರಾರು ಕೋಟಿ ತೆರಿಗ ನೋಟಿಸ್; ಕಾಂಗ್ರೆಸ್‌ ವಿರುದ್ಧ ಸದ್ಯಕ್ಕಿಲ್ಲ ಕ್ರಮ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ನಿನ್ನೆ(ಏಪ್ರಿಲ್‌ 1) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕಾಂಗ್ರೆಸ್‌ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಕಳುಹಿಸಿದ ನೋಟಿಸ್ ಪ್ರಶ್ನಿಸಿ ಪಕ್ಷ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠ ಸೋಮವಾರ ನಡೆಸಿದೆ. 1,823 ಕೋಟಿ ದಂಡದ ಜೊತೆಗೆ ಇನ್ನೂ ಎರಡು ನೋಟಿಸ್‌ಗಳನ್ನು ಪಡೆದಿದ್ದೇವೆ ಎಂದು ಕಾಂಗ್ರೆಸ್ ಹೇಳಿದ ಎರಡು ದಿನಗಳ ನಂತರ ವಿಚಾರಣೆ ನಡೆದಿದೆ.

ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಾನು ಈ ವಿಷಯದಲ್ಲಿ ಹೇಳಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಒಂದು ರಾಜಕೀಯ ಪಕ್ಷವಾಗಿದ್ದು, ಚುನಾವಣೆಗಳು ನಡೆಯುತ್ತಿರುವುದರಿಂದ ನಾವು ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲು ಹೋಗುವುದಿಲ್ಲ ಎಂದಿದ್ದಾರೆ. ಇದಲ್ಲದೆ, ಲೋಕಸಭೆ ಚುನಾವಣೆ ಮುಗಿಯುವವರೆಗೆ ಐಟಿ ಇಲಾಖೆ ಏನನ್ನೂ ವಸೂಲಿ ಮಾಡುವುದಿಲ್ಲ ಎಂದು ಐಟಿ ಹೇಳಿರುವುದಾಗಿ ಕೇಂದ್ರ ಹೇಳಿದೆ.

ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆಯನ್ನು ಜುಲೈ 24 ರಂದು ನಡೆಸಲಾಗುವುದು ಎಂದು ನ್ಯಾಯಲಯ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

4 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

4 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

5 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

6 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

7 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

8 hours ago