ನಗೌರ್ : ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಶನಿವಾರ ಆರೋಪಿಸಿದ್ದಾರೆ ಮತ್ತು ಜನ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡಿದ್ದಾರೆ.
ರಾಜಸ್ಥಾನದ ನಗೌರ್ ಜಿಲ್ಲೆಯ ಲಾಡ್ನೂನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖೇಶ್ ಭಾಕರ್ ಅವರ ಪರವಾಗಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಪೈಲಟ್, “ಬಿಜೆಪಿ ಧರ್ಮದ ಹೆಸರಿನಲ್ಲಿ ಜನರ ನಡುವೆ ಒಡಕು ಮತ್ತು ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಿಸತ್ತದೆ. ಆದರೆ ನಾವು ಜಾಗರೂಕರಾಗಿರಬೇಕು ಎಂದರು.
ಪರ್ಬತ್ಸರ್‌ನ ಕಾಂಗ್ರೆಸ್ ಅಭ್ಯರ್ಥಿ ರಾಮ್ನಿವಾಸ್ ಗವಾಡಿಯಾ ಅವರನ್ನು ಬೆಂಬಲಿಸಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪೈಲಟ್ ಕೂಡ ಭಾಗವಹಿಸಿದ್ದರು.
200 ಸ್ಥಾನಗಳ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.