ಅಹಮದಾಬಾದ್: ರಾಜ್ಯ ವಿಧಾನಸಭೆ ಚುನಾವಣೆ ಒಂದು ತಿಂಗಳು ಬಾಕಿ ಇರುವಾಗಲೇ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಜಯನಾರಾಯಣ ವ್ಯಾಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ವ್ಯಾಸ್ ಅವರು, ಕಳೆದ ಮೂರು ದಶಕಗಳಿಂದ ಬಿಜೆಪಿಯ ಸಿದ್ಧಾಂತದಂತೆ ಸಕ್ರಿಯವಾಗಿ ಬಿಜೆಪಿಗೆ ಸೇವೆ ಸಲ್ಲಿಸಿದ್ದೇನೆ. ವೈಯಕ್ತಿಕ ಕಾರಣಗಳಿಗಾಗಿ ಇಂದು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅವರು ಕಾಂಗ್ರೆಸ್ ಗೆ ರ್ಪಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.