ರಾಷ್ಟ್ರೀಯ

ಫೆಬ್ರವರಿ 17, 18ರಂದು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

ಲೋಕಸಭೆ ಚುನಾವಣೆ ಸಮೀಸುತ್ತಿದ್ದಂತೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಭೂತ್‌ ಹಂತದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದ್ದು, ಇದರ ನಡುವೆ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.

ಫೆಬ್ರವರಿ 17 ಹಾಗೂ 18ರಂದು ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ ನಾಯಕರನ್ನು ಆಹ್ವಾನಿಸಲಾಗಿದೆ. ದೆಹಲಿಯ ಭಾರತ ಮಂಟಪದಲ್ಲಿ ಈ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಸಭೆಗೆ ಎಲ್ಲಾ ರಾಜ್ಯಗಳ ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ.

ಸಭೆಯ ಮೊದಲ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಷಣ ಮಾಡಲಿದ್ದು, ಕೊನೆಯ ದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾಯಕಾರಿಣಿ ಸಭೆಯ ಮುನ್ನಾ ದಿನ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಿಗದಿಯಾಗಿದ್ದು, ಪ್ರಧಾನ ಕಾರ್ಯದರ್ಶಿಗಳು, ಕೋಶ ಸಂಚಾಲಕರು, ಎಲ್ಲಾ ಮೋರ್ಚಗಳ ಅಧ್ಯಕ್ಷರು, ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯಿತಿಗಳ ಸದಸ್ಯರನ್ನು ಆಹ್ವಾನಿಸಲಾಗಿದೆ.

andolana

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

1 hour ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 hour ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago