Mysore
19
few clouds

Social Media

ಸೋಮವಾರ, 04 ನವೆಂಬರ್ 2024
Light
Dark

ಕೇರಳದ ಎರ್ನಾಕುಲಂ ಬಳಿ ಸ್ಫೋಟ: ದೇಶಾದ್ಯಂತ ಹೈ ಅಲರ್ಟ್

ನವದೆಹಲಿ : ಕೇರಳದ ಎರ್ನಾಕುಲಂನಲ್ಲಿ ಕ್ರಿಸ್ತಿಯನ್ ಸಮುದಾಯವನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟ ಸಂಭವಿಸಿ ಓರ್ವ ನಾಗರಿಕ ಮೃತಪಟ್ಟು 36 ಜನರು ಗಾಯಗೊಂಡಿರುವ ಭೀಕರ ಘಟನೆ ನಂತರ ಗೃಹ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ.

ಕೇರಳ ಬ್ಲಾಸ್ಟ್​ ಬಳಿಕ ದೆಹಲಿ ಪೊಲೀಸರು ಅಲರ್ಟ್​  ಆಗಿದ್ದು ರಾಜಧಾನಿಯಲ್ಲಿ  ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ದೆಹಲಿಯ ಎಲ್ಲಾ ಪ್ರದೇಶದಲ್ಲಿ ಹದ್ದಿನ ಕಣ್ಣಿರಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿಯಾದರೂ ಇಂತಹ ಸ್ಫೋಟ ನಡೆಯಬಹುದು ಎಂಬ ಆತಂಕದಿಂದ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿಯೂ ಕಟ್ಟೆಚ್ಚರ : ಗಡಿ ರಾಜ್ಯ ಕೇರಳದಲ್ಲಿ ಬಾಂಬ್ ಸ್ಫೋಟದ ನಂತರ ಕರಾವಳಿ ಜಿಲ್ಲೆ ಮಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಕೇರಳದ ಕೊಚ್ಚಿ ಬಳಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಸಂಭವಿಸಿದ ಸ್ಫೋಟವು ಸುಧಾರಿತ ಸ್ಫೋಟಕ ಸಾಧನದಿಂದಾಗಿ ಒಂದು ಜೀವವನ್ನು ಬಲಿ ತೆಗೆದುಕೊಂಡಿದ್ದು, 36 ಮಂದಿ ಗಾಯಗೊಂಡರು ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಐಇಡಿಯಿಂದ ಸ್ಫೋಟ ಸಂಭವಿಸಿದೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥರು ಸುದ್ದಿಗಾರರಿಗೆ ತಿಳಿಸಿದ್ದು, ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಇಂದು ಬೆಳಿಗ್ಗೆ 9.40 ರ ಸುಮಾರಿಗೆ, ಕಲಮಸ್ಸೆರಿಯ ಜಮ್ರಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಫೋಟ ಸಂಭವಿಸಿದೆ, ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮಾಹಿತಿಯ ಪ್ರಕಾರ 36 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಜಿಪಿ ಹೇಳಿದರು. ಇದು ಭಯೋತ್ಪಾದನಾ ದಾಳಿಯೇ ಎಂಬ ಪ್ರಶ್ನೆಗೆ, ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಡಿಜಿಪಿ ಹೇಳಿದರು.

ತನಿಖೆಯ ನಂತರವೇ ನಾನು ವಿವರಗಳನ್ನು ದೃಢೀಕರಿಸಬಲ್ಲೆ. ನಾವು ಎಲ್ಲಾ ಕೋನಗಳನ್ನು ಪರಿಶೀಲಿಸುತ್ತಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ನಾವು ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ