ಗುಜರಾತ್‌ನ ವಡೋದರಾದ ಹರಣಿ ಸರೋವರದಲ್ಲಿ ದೋಣಿ ದುರಂತ ಸಂಭವಿಸಿದೆ. 12 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
ಒಟ್ಟು 27 ವಿದ್ಯಾರ್ಥಿಗಳು ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು ಹಾಗೂ ಯಾರೂ ಸಹ ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾಕಾರ್ಯ ಆರಂಭಿಸಿದ್ದು, ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳನ್ನು ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.





