ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.
ಈ ಘಟನೆ ಕಳೆದ ವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರು, ಭದ್ರತಾ ತಪಾಸಣೆಯ ಅಗತ್ಯವೇನಿದೆ ಎಂದು ಅವಾಜ್ ಹಾಕಿದ್ದರು. ಸಿಬ್ಬಂದಿ ಶಿಷ್ಟಾಚಾರದ ಬಗ್ಗೆ ವಿವರಿಸಲು ಪ್ರಯತ್ನಿಸಿದರೂ, ಇಬ್ಬರಲ್ಲಿ ಒಬ್ಬರು ಅಣು ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಎಂಬುದು ತಿಳಿದುಬಂದಿದೆ.
ದೆಹಲಿ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.