ರಾಷ್ಟ್ರೀಯ

ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಬೆದರಿಕೆ: ಇಬ್ಬರ ಬಂಧನ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್‌ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.

ಈ ಘಟನೆ ಕಳೆದ ವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರು, ಭದ್ರತಾ ತಪಾಸಣೆಯ ಅಗತ್ಯವೇನಿದೆ ಎಂದು ಅವಾಜ್‌ ಹಾಕಿದ್ದರು. ಸಿಬ್ಬಂದಿ ಶಿಷ್ಟಾಚಾರದ ಬಗ್ಗೆ ವಿವರಿಸಲು ಪ್ರಯತ್ನಿಸಿದರೂ, ಇಬ್ಬರಲ್ಲಿ ಒಬ್ಬರು ಅಣು ಬಾಂಬ್‌ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಎಂಬುದು ತಿಳಿದುಬಂದಿದೆ.

ದೆಹಲಿ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

10 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

10 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

11 hours ago