ರಾಷ್ಟ್ರೀಯ

ಯಾವುದೇ ಗೊಂದಲ ಬೇಡ, ಲೋಕಸಭೆಗೂ ಮುನ್ನ ಪೌರತ್ವ ಕಾಯ್ದೆ ಜಾರಿ: ಅಮಿತ್‌ ಶಾ

ನವದೆಹಲಿ: ಇಂದು ( ಫೆಬ್ರವರಿ 10 ) ನಡೆದ ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿದ ಅಮಿತ್‌ ಶಾ ʼಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭೆ ಚುನಾವಣೆಗೂ ಮುನ್ನವೇ ಜಾರಿಗೆ ಬರುತ್ತದೆ. ಇದರಲ್ಲಿ ಯಾವುದೇ ಗೊಂದಲ ಬೇಡʼ ಎಂದು ಹೇಳಿದರು.

ಇನ್ನೂ ಮುಂದುವರಿದು ಮಾತನಾಡಿದ ಅಮಿತ್‌ ಶಾ ಸಿಎಎ ಕಾಂಗ್ರೆಸ್‌ ಸರ್ಕಾರದ ಭರವಸೆ ಎಂದರು. ʼಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಇತರೆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಅದರಿಂದ ಕಾಂಗ್ರೆಸ್ ಹಿಂದೆ ಸರಿಯುತ್ತಿದೆʼ ಎಂದರು.

ಅಲ್ಲದೇ ʼಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಪೌರತ್ವ ತಿದ್ದುಪಡಿ ಕಾಯ್ದೆಯು ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ಒದಗಿಸುವ ಕಾಯಿದೆಯಾಗಿದೆʼ ಎಂದು ಸ್ಪಷ್ಟನೆ ನೀಡಿದರು.

andolana

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

3 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

3 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

3 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

17 hours ago