ಮುಂದಿನ ಏಳು ದಿನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾಂತನು ಠಾಕೂರ್ ʼರಾಮಮಂದಿರ ಉದ್ಘಾಟನೆ ನೆರವೇರಿದೆ. ಮುಂದಿನ ಏಳು ದಿನಗಳಲ್ಲಿ ಸಿಎಎಯನ್ನು ಜಾರಿಗೊಳಿಸಲಾಗುತ್ತದೆ. ಇದು ನಾನು ನೀಡುತ್ತಿರುವ ಗ್ಯಾರಂಟಿ. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ. ಇಡಿ ದೇಶದಾದ್ಯಂತ ಈ ಕಾಯ್ದೆ ಜಾರಿಯಾಗಲಿದೆʼ ಎಂದು ಹೇಳಿದರು.





