ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಆರೋಪಿಯೊಬ್ಬನಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ ನಾಯಕ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
2017 ರ ಸೆಪ್ಟೆಂಬರ್ 05 ರಂದು ಬೆಂಗಳೂರಿನಲ್ಲಿ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಗೌರಿ ತಂಗಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್ ನಾಯಕ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್, ಆರೋಪಿಗೆ ಕಳೆದ ಡಿಸೆಂಬರ್ 7ರಂದು ಜಾಮೀನು ನೀಡಿ ಆದೇಶ ಹೊರಡಿಸಿತ್ತು.
ಆರೋಪಿ ಮೋಹನ್ ನಾಯಕ್ ಡಿಸೆಂಬರ್ 7, 2023 ರಂದು ವಿಚಾರ ವಿಳಂಬ ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ನೀಡಿತ್ತು. ಗೌರಿ ಹತ್ಯೆ ಪ್ರಕರಣದಲ್ಲಿ ನಾಯಕ್ 11ನೇ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…