ರಾಷ್ಟ್ರೀಯ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯ ಜಾಮೀನು ರದ್ದುಗೊಳಿಸಿ: ಸುಪ್ರೀಂ ನೋಟಿಸ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿನ ಆರೋಪಿಯೊಬ್ಬನಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‌ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ ನಾಯಕ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

2017 ರ ಸೆಪ್ಟೆಂಬರ್ 05 ರಂದು ಬೆಂಗಳೂರಿನಲ್ಲಿ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಗೌರಿ ತಂಗಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್‌ ನಾಯಕ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌, ಆರೋಪಿಗೆ ಕಳೆದ ಡಿಸೆಂಬರ್‌ 7ರಂದು ಜಾಮೀನು ನೀಡಿ ಆದೇಶ ಹೊರಡಿಸಿತ್ತು.

ಆರೋಪಿ ಮೋಹನ್ ನಾಯಕ್ ಡಿಸೆಂಬರ್ 7, 2023 ರಂದು ವಿಚಾರ ವಿಳಂಬ ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ನೀಡಿತ್ತು. ಗೌರಿ ಹತ್ಯೆ ಪ್ರಕರಣದಲ್ಲಿ ನಾಯಕ್‌ 11ನೇ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

andolanait

Recent Posts

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

1 hour ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

7 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

7 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

7 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

8 hours ago