7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ ಮೂಲಕ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನಿನ್ನೆ ( ಫೆಬ್ರವರಿ 1 ) ನವದೆಹಲಿಯಲ್ಲಿ ನಡೆದ ಪ್ರಾಧಿಕಾರದ 28ನೇ ಸಭೆಯಲ್ಲಿ ಕರ್ನಾಟಕದ ವಾದಕ್ಕೆ ಸ್ಪಂದನೆ ಸಿಕ್ಕಿದೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ರಾಜ್ಯಕ್ಕೆ ಇಲ್ಲದಂತಾಗಿದೆ.
ರಾಜ್ಯದ ವಾದ: ಕರ್ನಾಟಕದ 4 ಜಲಾಶಯಗಳಿಗೆ 2023ರ ಜೂನ್ 1ರಿಂದ ಜನವರಿ 29ರವರೆಗೆ ಶೇ.52.44ರಷ್ಟು ಒಳಹರಿವಿನ ಕೊರತೆ ಇದೆ. ಫೆಬ್ರವರಿ ಪೂರ್ಣ ಅವಧಿಗೆ ಕರ್ನಾಟಕವು ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಕಾವೇರಿ ಜಲವಿವಾದ ನ್ಯಾಯಾಧೀಕರಣದ ಆದೇಶದಂತೆ ನಿಗದಿತ ಪ್ರಮಾಣದ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಜನವರಿ 18ರಂದು ನಡೆದಿದ್ದ ಸಭೆಯಲ್ಲಿ ನಿರ್ಧರಿಸಿತ್ತು. ಬಿಳಿಗುಂಡ್ಲುವಿನಲ್ಲಿ ಹರಿವು ಸ್ಥಿರವಾಗಿರುವುದರಿಂದ ಅಲ್ಲಿವರೆಗಿನ ಹರಿವು ಸಾಮಾನ್ಯವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಆದರೆ ಡಿಸೆಂಬರ್ 19ರಿಂದ ಜನವರಿ 28ರವರೆಗೆ ಕರ್ನಾಟಕದ ಜಲಾಶಯಗಳಲ್ಲಿ ಶೇ. 52.46ರಷ್ಟು ಒಳಹರಿವಿನ ಕೊರತೆ ಇದೆ ಎಂದು ಕರ್ನಾಟಕ ವಾದ ಮಂಡಿಸಿತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…