ದುಬೈ : ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.
ಅದರ ಭಾಗವಾಗಿ ನಿನ್ನೆ ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್ ಗೆ ಚಾಲನೆ ನೀಡಲಾಗಿದೆ. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು.
ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್ , ತಮಿಳುಚಿತ್ರರಂಗದಿಂದ ಆರ್ಯ ಮತ್ತು ಜೀವಾ , ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ಗುಪ್ತಾ , ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.
ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.
ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್ ದಲ್ಲಿದ್ದೆ. ಆದರೆ ಈಗ ಕ್ರಿಕೆಟ್ ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.